ಸಿಸಿಬಿ ಹೆಡ್ ಕಾನ್‌ಸ್ಟೇಬಲ್‌ನಿಂದಲೇ ₹11 ಲಕ್ಷ ಕಳ್ಳತನ : ಕಾನೂನು ಕ್ರಮಕ್ಕೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಚನೆ

CCB head constable steals Rs 11 lakh: Police Commissioner Seemant Kumar Singh orders legal action

Dec 5, 2025 - 15:35
Dec 5, 2025 - 15:38
 0
ಸಿಸಿಬಿ ಹೆಡ್ ಕಾನ್‌ಸ್ಟೇಬಲ್‌ನಿಂದಲೇ ₹11 ಲಕ್ಷ ಕಳ್ಳತನ : ಕಾನೂನು ಕ್ರಮಕ್ಕೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸೂಚನೆ

ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಸಿಸಿ ಕ್ಯಾಮೆರಾ ದೃಶ್ಯದಿಂದ ಬಹಿರಂಗ

  • ಸೈಬರ್ ಪ್ರಕರಣದಲ್ಲಿ ಜಪ್ತಿ ಮಾಡಿದ ಕಾರಿನಲ್ಲಿದ್ದ ಹಣ ಕಣ್ಮರೆಯಾಗಿದ್ದರಿಂದ ದೂರು
  • ತನಿಖೆಯಲ್ಲಿ ಪೊಲೀಸ್ ಸಿಬ್ಬಂದಿಯೇ ಬ್ಯಾಗ್ ತೆಗೆದುಕೊಂಡಿರುವುದು ಪತ್ತೆ

ಬೆಂಗಳೂರು: ನಗರ ಪೊಲೀಸ್ ಆಯುಕ್ತರ ಕಚೇರಿಯ ಆವರಣದಲ್ಲೇ ನಡೆದಿರುವ ಅಚ್ಚರಿಯ ಘಟನೆ ಸಂಭಧಿಸಿದಂತೆ  ಸಿಸಿಬಿ ವಿಭಾಗದ ಹೆಡ್ ಕಾನ್‌ಸ್ಟೇಬಲ್‌ವೊಬ್ಬರು ₹11 ಲಕ್ಷ ರೂಪಾಯಿ ಕಳ್ಳತನ ಮಾಡಿರುವುದು ತನಿಖೆಯಿಂದ ಬಹಿರಂಗವಾಗಿದೆ ಎನ್ನಲಾಗಿದೆ.

ಸೈಬರ್ ಅಪರಾಧ ಪ್ರಕರಣದಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಹೊರಬಂದ ಆರೋಪಿಯೊಬ್ಬ, ತನ್ನ ಕಾರಿನಲ್ಲಿ ₹11 ಲಕ್ಷ ಹಣವಿರುವ ಬ್ಯಾಗ್ ನಾಪತ್ತೆಯಾಗಿದೆ ಎಂದು ಸೈಬರ್ ಕ್ರೈಂ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಕೈಗೊಂಡಿದ್ದರು.

  • ಸಿಸಿ ಕ್ಯಾಮೆರಾ ದೃಶ್ಯದಲ್ಲಿ ಸತ್ಯ ಹೊರಬಿದ್ದದ್ದು

ಜಪ್ತಿ ಮಾಡಿದ್ದ ಕಾರನ್ನು ಆಯುಕ್ತರ ಕಚೇರಿ ಹಿಂದಿನ ಪಾರ್ಕಿಂಗ್ ಪ್ರದೇಶದಲ್ಲಿ ನಿಲುಗಡೆ ಮಾಡಲಾಗಿತ್ತು. ಸಿಸಿ ಕ್ಯಾಮೆರಾ ದೃಶ್ಯ ಪರಿಶೀಲಿಸಿದಾಗ, ಆ ಕಾರಿನಿಂದ ಹಣವಿದ್ದ ಬ್ಯಾಗ್ ಅನ್ನು ಹೆಡ್ ಕಾನ್‌ಸ್ಟೇಬಲ್ ಜಬೀವುಲ್ಲಾ ತೆಗೆದುಕೊಂಡು ಹೋಗಿರುವುದು ಸ್ಪಷ್ಟವಾಗಿ ದೃಢಪಟ್ಟಿದೆ.

ಪೊಲೀಸರು ಜಬೀವುಲ್ಲಾ ಅವರ ಮನೆಯಲ್ಲಿ ಪರಿಶೀಲನೆ ನಡೆಸಿದಾಗ, ಮನೆಯ ಬೆಡ್‌ನ ಕೆಳಗೆ ಡಬ್ಬಿಗಳಲ್ಲಿ ಜೋಡಿಸಿ ಇಡಲಾಗಿದ್ದ ಹಣವನ್ನು ಪತ್ತೆಹಚ್ಚಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

  • ಹಿರಿಯ ಅಧಿಕಾರಿಗಳಿಗೆ ವರದಿ ಸಲ್ಲಿಕೆ

“ಪ್ರಕರಣದ ಬಗ್ಗೆ ಮಾಹಿತಿ ಬಂದಿದ್ದು, ಹಿರಿಯ ಅಧಿಕಾರಿಗಳಿಗೆ ವರದಿ ನೀಡುವಂತೆ ಸೂಚಿಸಿದ್ದೇನೆ. ವರದಿ ಆಧರಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ತಿಳಿಸಿದ್ದಾರೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.