ಕರ್ನಾಟಕ ರಾಜಭವನ ಈಗ ಲೋಕಭವನ
Raj Bhavan renamed ‘Lok Bhavan’ in Karnataka
ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ
ಬೆಂಗಳೂರು: ಭಾರತ ಸರ್ಕಾರದ ಗೃಹ ಸಚಿವಾಲಯದ ಸೂಚನೆ ಹಾಗೂ ರಾಜ್ಯಪಾಲರ ಅನುಮೋದನೆಯಂತೆ, ಕರ್ನಾಟಕದ ರಾಜಭವನಕ್ಕೆ ‘ಲೋಕಭವನ’ ಎಂದು ಮರುನಾಮಕರಣ ಮಾಡಿ ಆದೇಶ ಹೊರಡಿಸಲಾಗಿದೆ.
ಬದಲಾವಣೆಗೆ ರಾಜ್ಯಪಾಲ ಥಾವರ್ ಚಂದ್ರ ಗೆಹ್ಲೋಟ್ ಅನುಮತಿ ನೀಡಿದ್ದು, ಈ ಸಂಬಂಧ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಅಧಿಕೃತ ಪತ್ರ ರವಾನಿಸಿದ್ದಾರೆ.
ಇನ್ನು ಮುಂದೆ ಸರ್ಕಾರಿ ಎಲ್ಲ ಇಲಾಖೆಗಳು, ಜಾಲತಾಣಗಳು, ಅಧಿಕೃತ ಪತ್ರ ವ್ಯವಹಾರಗಳು ಹಾಗೂ ಕಡತಗಳಲ್ಲಿ ‘ಲೋಕಭವನ’ ಎಂಬ ಹೆಸರನ್ನು ಬಳಸಬೇಕೆಂದು ರಾಜ್ಯಪಾಲರು ನಿರ್ದೇಶಿಸಿದ್ದಾರೆ. ದೇಶದ ಎಲ್ಲಾ ರಾಜ್ಯಗಳಲ್ಲಿಯೂ ರಾಜಭವನಗಳನ್ನು ಲೋಕಭವನವಾಗಿ ಮರುನಾಮಕರಣ ಮಾಡುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿದೆ.
“ಭಾರತ ಸರ್ಕಾರದ ಗೃಹ ಸಚಿವಾಲಯದ ಸಂವಹನದ ಅನುಸಾರ ದಿನಾಂಕ 25-11-2025 ಹಾಗೂ ಕರ್ನಾಟಕ ರಾಜ್ಯಪಾಲರ ಅನುಮೋದನೆಯ ಪ್ರಕಾರ, ‘ರಾಜಭವನ, ಕರ್ನಾಟಕ’ದ ಹೆಸರನ್ನು ಲೋಕಭವನ, ಕರ್ನಾಟಕ ಎಂದು ಮರುನಾಮಕರಣ ಮಾಡಲಾಗಿದೆ” ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.


