ಅಕ್ರಮದಲ್ಲಿ ಶಾಮೀಲಾಗುವವರ ವಿರುದ್ಧ ಕಠಿಣ ಕ್ರಮ : ನೂತನ ಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ

ರಾಜ್ಯದ ನೂತನ ಕಾರಾಗೃಹ ಡಿಜಿಪಿ ಅಲೋಕ್ ಕುಮಾರ್ ಅವರು ಅಧಿಕಾರ ಸ್ವೀಕರಿಸಿದ ತಕ್ಷಣವೇ ಇಲಾಖೆಗೆ ಕಠಿಣ ಸಂದೇಶ ನೀಡಿದ್ದಾರೆ. ಉತ್ತಮವಾಗಿ ಕೆಲಸ ಮಾಡುವ ಅಧಿಕಾರಿಗಳು ಸ್ನೇಹಿತರಂತೆ, ಆದರೆ ಉದ್ದೇಶಪೂರ್ವಕವಾಗಿ ಅಕ್ರಮದಲ್ಲಿ ತೊಡಗುವವರನ್ನು ಕಟ್ಟುನಿಟ್ಟಾಗಿ ಎದುರಿಸುವುದಾಗಿ ಎಚ್ಚರಿಸಿದ್ದಾರೆ. ರಾಜ್ಯದ ಹಲವಾರು ಜೈಲುಗಳಲ್ಲಿ ಸುಧಾರಣೆ ಅಗತ್ಯವಿದೆ ಎಂದು ತಿಳಿಸಿದ್ದಾರೆ.

Dec 12, 2025 - 01:50
Dec 12, 2025 - 01:56
 0
ಅಕ್ರಮದಲ್ಲಿ ಶಾಮೀಲಾಗುವವರ ವಿರುದ್ಧ ಕಠಿಣ ಕ್ರಮ : ನೂತನ ಡಿಜಿಪಿ ಅಲೋಕ್ ಕುಮಾರ್ ಎಚ್ಚರಿಕೆ


ಅಪರಾಧಕ್ಕೆ ಸವಾಲು ಕನ್ನಡ ದಿನಪತ್ರಿಕೆ

ಬೆಂಗಳೂರು: ಕಾರಾಗೃಹ ಇಲಾಖೆಯಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುವ ಅಧಿಕಾರಿಗಳ ರ‍್ಯಾಂಕ್ ನನಗೆ ಮುಖ್ಯವಲ್ಲ; ಅವರನ್ನು ಸ್ನೇಹಿತರಂತೆ ಕಾಣುತ್ತೇನೆ. ಆದರೆ ಉದ್ದೇಶಪೂರ್ವಕವಾಗಿ ಅಕ್ರಮಗಳಲ್ಲಿ ತೊಡಗುವವರನ್ನು ಬೇರೆ ರೀತಿಯಲ್ಲಿಪರಿಗಣಿಸಬೇಕಾಗುತ್ತದೆ ಎಂದು ರಾಜ್ಯ ಕಾರಾಗೃಹ ಹಾಗೂ ಸುಧಾರಣಾ ಸೇವೆಗಳ ಇಲಾಖೆಯ ನೂತನ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಎಚ್ಚರಿಕೆ ನೀಡಿದರು.

ಗುರುವಾರ ಶೇಷಾದ್ರಿ ರಸ್ತೆಯಲ್ಲಿರುವ ಕಾರಾಗೃಹ ಇಲಾಖೆಯ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಅವರು, ಇಲಾಖೆಯ ಕಾರ್ಯಪಧ್ಯತೆಯ ಬಗ್ಗೆ ಸ್ಪಷ್ಟ ಸಂದೇಶ ಹಂಚಿಕೊಂಡರು.

ಬೈಲಹೊಂಗಲ ಸೇರಿದಂತೆ ರಾಜ್ಯದ ಹಲವಾರು ಕಾರಾಗೃಹಗಳಿಗೆ ಅವರು ಹಿಂದೆಯೇ ಭೇಟಿ ನೀಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲವು ಬಾರಿ ದಾಳಿ ನಡೆಸಿ ಪರಿಶೀಲನೆ ಮಾಡಿರುವ ಅನುಭವದ ಆಧಾರದ ಮೇಲೆ,ಇಲಾಖೆಯಲ್ಲಿ ಕೆಲವು ಸುಧಾರಣೆಗಳು ಅತ್ಯಗತ್ಯ ಎಂದು ತಿಳಿಸಿದರು.

ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಸೇರಿದಂತೆ ಇರುವ ಸಮಸ್ಯೆಗಳನ್ನು ಅರ್ಥೈಸಿಕೊಂಡು ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

 

“ಉತ್ತಮವರನ್ನು ಪ್ರೋತ್ಸಾಹ – ತಪ್ಪು ಮಾಡಿದವರಿಗೆ ಶಿಕ್ಷೆ ಅನಿವಾರ್ಯ”

ಅಕ್ರಮ ನಿಗ್ರಹದ ಬಗ್ಗೆ ಅಲೋಕ್ ಕುಮಾರ್ ಸ್ಪಷ್ಟ ಸಂದೇಶ ನೀಡಿದರು: ಪ್ರತಿ ಅಧಿಕಾರಿ ಮತ್ತು ಸಿಬ್ಬಂದಿಯೂ ಮುಖ್ಯ. ಉತ್ತಮವಾಗಿ ಕೆಲಸ ಮಾಡುವವರಿಗೆ ಸದಾ ಪ್ರೋತ್ಸಾಹವಿರುತ್ತದೆ.” ಸಣ್ಣಪುಟ್ಟ ಹಾಗೂ ಉದ್ದೇಶಪೂರ್ವಕವಲ್ಲದ ತಪ್ಪುಗಳಿಗೆ ಕಠಿಣತೆ ತೋರಬೇಕಾಗಿಲ್ಲವೆಂದರೂ,ಉದ್ದೇಶಪೂರ್ವಕವಾಗಿ ಅಕ್ರಮದಲ್ಲಿ ಭಾಗಿಯಾದರೆ ಯಾವುದೇ ರೀತಿಯ ಸಹಿಷ್ಣುತೆಇರೋದಿಲ್ಲ ಎಂದು ಎಚ್ಚರಿಸಿದರು.

ರಾಜ್ಯ ಪೊಲೀಸ್ ತರಬೇತಿ ಕೇಂದ್ರದಲ್ಲಿ ಎಡಿಜಿಪಿಯಾಗಿದ್ದ ಅಲೋಕ್ ಕುಮಾರ್ ಅವರಿಗೆ ರಾಜ್ಯ ಸರ್ಕಾರ ಬುಧವಾರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಹುದ್ದೆಗೆ ಬಡ್ತಿ ನೀಡಿ, ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯ ಮುಖ್ಯಸ್ಥರಾಗಿ ನೇಮಕ ಮಾಡಿತ್ತು.ಇದೇ ವೇಳೆ ಕಾರಾಗೃಹ ಇಲಾಖೆಯ ಎಡಿಜಿಪಿಯಾಗಿದ್ದ ಬಿ. ದಯಾನಂದ್ ಅವರನ್ನುಪೊಲೀಸ್ ತರಬೇತಿ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆ ಮಾಡಲಾಗಿದೆ.

Vishwaprakash T Malagond ವಿಶ್ವಪ್ರಕಾಶ ಟಿ ಮಲಗೊಂಡ, 2020-2023 ಪತ್ರಿಕೆಯಲ್ಲಿ ಹವ್ಯಾಸಿ ಬರಹಗಾರರಾಗಿ ಕಾರ್ಯನಿರ್ವಹಣೆ. ಪ್ರಸ್ತುತ "ಅಪರಾಧಕ್ಕೆ ಸವಾಲು" ಕನ್ನಡ ದಿನಪತ್ರಿಕೆಯ ಉಪಸಂಪಾದಕ.